ALU BONDA ಆಲೂ ಬೋಂಡಾ
ಆಲೂಗಡ್ಡೆಯಿಂದ ಮಾಡುವ ಈ ರುಚಿಯಾದ ಬೋಂಡಾ ಯಾರಿಗೆ ಇಷ್ಟವಿಲ್ಲ ಹೇಳಿ? ಸುಲಭವಾಗಿ ಮಾಡಬಹುದು ಕೂಡ.
ಮಾಡುವ ವಿಧಾನ:-
ನಾಲ್ಕೈದು ಆಲೂಗಡ್ಡೆ ಬೇಯಿಸಿ ಸಿಪ್ಪೆ ತೆಗೆದು ಪುಡಿ ಮಾಡಿಡಿ .
ಒಂದು ಇಂಚು ಶುಂಠಿ ತೆಗೆದು ತುರಿದಿಡಿ. ಸ್ವಲ್ಪ ಕೊತ್ತಂಬರಿ ಸೊಪ್ಪು ಸಣ್ಣಗೆ ಹೆಚ್ಚಿಡಿ. ಎರಡು ಹಸಿ ಮೆಣಸಿನ ಕಾಯಿ ಸಣ್ಣಗೆ ಹೆಚ್ಚಿಡಿ.
ಒಂದು ಬಟ್ಟಲಿನಲ್ಲಿ ಮೇಲೆ ಹೇಳಿದ ಎಲ್ಲಾ ಸಾಮಗ್ರಿಗಳನ್ನು ಹಾಕಿ ಸ್ವಲ್ಪ ಉಪ್ಪು, ನಿಂಬೆ ರಸ ಸೇರಿಸಿ ಪುಟ್ಟ ಪುಟ್ಟ ಉಂಡೆ ಮಾಡಿಡಿ.



ಇನ್ನೊಂದು ಬಟ್ಟಲಿನಲ್ಲಿ ಕಡಲೆ ಹಿಟ್ಟು, ಒಂದು ಚಮಚ ಅಕ್ಕಿ ಹಿಟ್ಟು, ಅರ್ಧ ಚಮಚ ಖಾರದ ಪುಡಿ, ಇಂಗು, ಉಪ್ಪು, ಹೆಚ್ಚಿದ ಕೊತ್ತಂಬರಿ ಸೊಪ್ಪು ಸ್ವಲ್ಪ ಹಾಕಿ ಚೆನ್ನಾಗಿ ಕಲೆಸಿ ನೀರು ಸ್ವಲ್ಪ ಸ್ವಲ್ಪವೇ ಸೇರಿಸಿ ಬಜ್ಜಿ ಹಿಟ್ಟಿನ ಹದಕ್ಕೆ ಕಲಸಿ ಆಲೂ ಉಂಡೆಗಳನ್ನು ಅದ್ದಿ ಕಾದ ಎಣ್ಣೆಯಲ್ಲಿ ಗರಿ ಗರಿಯಾಗಿ ಕರಿದು ನಿಮ್ಮ ಇಷ್ಟದ ಚಟ್ನಿ ಅಥವಾ ಸಾಸ್ ಜೊತೆಗೆ ಸವಿಯಿರಿ.

ಧನ್ಯವಾದಗಳು 🙏🙏🙏
